ಹಾವೇರಿ ವಕ್ಫ್ ಗಲಾಟೆ: 28ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Prasthutha|

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಡಕೋಳ ಗ್ರಾಮದಲ್ಲಿ ವಕ್ಫ್ ಆಸ್ತಿ ಗಲಾಟೆ ನಡೆದಿದ್ದು, 28ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -


ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಮನೆಗಳ ಖಾತಾ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗುತ್ತಿದೆ ಎಂಬ ಆತಂಕದಿಂದ ಉದ್ರಿಕ್ತರು ಗಲಾಟೆ ನಡೆಸಿದ್ದರು. ಉದ್ರಿಕ್ತ ಗುಂಪು ಇನ್ನೊಂದು ಗುಂಪಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ, ಹಲ್ಲೆ ನಡೆಸಿತ್ತು. ಗಲಾಟೆಯಲ್ಲಿ ಒಟ್ಟು ಐವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸವಣೂರು ಮತ್ತು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಮುಸ್ಲಿಂ ಮುಖಂಡ ಮಹಮದ್ ರಫಿ ಎಂಬುವರ ಮನೆ ಮೇಲೆ ಉದ್ರಿಕ್ತ ಗುಂಪಿನಿಂದ ದಾಳಿ ನಡೆದಿದೆ. ಕಲ್ಲು ತೂರಾಟ ನಡೆಸಿ ಮನೆ ಮುಂದೆ ಇದ್ದ ಬೈಕ್ ಒಡೆದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಡಕೋಳ ಗ್ರಾಮಕ್ಕೆ ಡಿಸಿ ವಿಜಯ್ ಮಹಾಂತೇಶ್, ಎಸ್ಪಿ ಅಂಶು ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಹಿತಕರ ಘಟನೆಗಳಾಗದಂತೆ ಗ್ರಾಮಸ್ಥರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.




Join Whatsapp