ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ: ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

Prasthutha|

- Advertisement -

ವಿಜಯಪುರ: ವಕ್ಫ್ ಬೋರ್ಡ್‌ನಿಂದ ಭಾರತೀಯರಿಗೆ ಅನ್ಯಾಯವಾಗುತ್ತಿದ್ದು, ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸುವಂತೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ವಕ್ಫ್ ಬೋರ್ಡ್‌ನಿಂದಾಗಿ ಜಮೀನು ಮಾಲಿಕರು, ರೈತರಿಗೆ ತೊಂದರೆಯಾಗುತ್ತಿದೆ. ರೈತರು, ಜಮೀನು ಮಾಲಿಕರು ಸೇರಿ ಧಾರ್ಮಿಕ ಸಂಸ್ಥೆ, ಮಠ ಮಾನ್ಯಗಳ ಜಮೀನನ್ನು ವಕ್ಫ್ ಆಕ್ರಮಿಸಿಕೊಳ್ಳುತ್ತದೆ. ವಕ್ಫ್ ಕಾನೂನು ಅಸಮಾನತೆ, ಕ್ರೂರತೆಯನ್ನು ಒಳಗೊಂಡಿದೆ. ವಕ್ಫ್ ಬೋರ್ಡ್‌ಗೆ ಅನಿಯಂತ್ರಿತ, ಪರಿಮಿತ ಅಧಿಕಾರ ನೀಡಲಾಗಿದೆ ಎಂದು ಪತ್ರದಲ್ಲಿ ಶಾಸಕರು ಉಲ್ಲೇಖಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಆಗುವುದಕ್ಕೆ ನಾವು ಬಿಡಬಾರದು. ಅದಕ್ಕಾಗಿ ನಾನು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ಪ ಬುದ್ನಿ ಎಂಬುವವರು ಕಳೆದ ವರ್ಷ ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು.



Join Whatsapp