ಮಹಿಳೆಯರಿಗೆ 2,100 ರೂ., ವಾರ್ಷಿಕ 2 ಎಲ್‌ಪಿಜಿ ಸಿಲಿಂಡರ್‌ ಫ್ರೀ: ಜಾರ್ಖಂಡ್‌ ಚುನಾವಣೆಗೆ ಬಿಜೆಪಿ ಗ್ಯಾರಂಟಿ

Prasthutha|

- Advertisement -

ರಾಂಚಿ: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ ಭಾನುವಾರ ಬಿಡುಗಡೆಗೊಳಿಸಿದರು.

ಬಿಜೆಪಿ ಜಾರ್ಖಂಡ್‌ನಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 2,100 ರೂ. ನೀಡುವುದು ಸೇರಿದಂತೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

- Advertisement -

ಬಿಜೆಪಿ ಪ್ರಣಾಳಿಕೆ ಏನು?

  • ಪ್ರತಿ ಮನೆಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ಮತ್ತು ವಾರ್ಷಿಕ 2 ಉಚಿತ ಸಿಲಿಂಡರ್‌
  • ನುಸುಳುಕೋರರು ಆಕ್ರಮಿಸಿಕೊಂಡಿರುವ ಆದಿವಾಸಿಗಳ ಭೂಮಿಯನ್ನು ಆದಿವಾಸಿಗಳಿಗೆ ಹಿಂದಿರುಗಿಸುವುದಾಗಿ ಪ್ರತಿಜ್ಞೆ
  • ಬುಡಕಟ್ಟು ಜನಾಂಗದವರನ್ನು ಮದುವೆಯಾಗುವ ನುಸುಳುಕೋರರ ಮಕ್ಕಳಿಗೆ ಬುಡಕಟ್ಟು ಸ್ಥಾನಮಾನ ರದ್ದು
  • ಆದಿವಾಸಿಗಳನ್ನು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ವ್ಯಾಪ್ತಿಯಿಂದ ಹೊರಗಿಡಲಾಗುವುದು
  • ಪ್ರಶ್ನೆ ಪತ್ರಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ
  • 5 ವರ್ಷಗಳಲ್ಲಿ ಯುವಕರಿಗೆ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ಅವಕಾಶಗಳನ್ನು ಖಾತರಿಪಡಿಸುತ್ತೇವೆ
  • 2,87,500 ಸರ್ಕಾರಿ ಹುದ್ದೆಗಳ ನೇಮಕಾತಿ ಪಾರದರ್ಶಕವಾಗಿ ನಡೆಯಲಿದ್ದು, ಮೊದಲ ಕ್ಯಾಬಿನೆಟ್‌ನಲ್ಲೇ ಪ್ರಕ್ರಿಯೆ ಶುರುವಾಗಲಿದೆ.
  • 2025ರ ನವೆಂಬರ್‌ ಒಳಗೆ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.


Join Whatsapp