ಕರಾವಳಿ ಸೇರಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ ಸಾಧ್ಯತೆ

Prasthutha|

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಕೊಂಚ ಕೂಡ ಬಿಡುವು ಕೊಡದೆ ಮಳೆಯಾಗುತ್ತಿದೆ. ನವೆಂಬರ್ 9ರ ತನಕ ಭಾರೀ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 2 ದಿನಗಳ ಕಾಲ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ.

- Advertisement -

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಗ್ರಾಮಾಂತರ , ರಾಮನಗರ, ಕೊಡಗು ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ನೀಡಿದೆ.

ಬೆಳ್ತಂಗಡಿಯಲ್ಲಿ ಭಾರಿ ಮಳೆ
ಬೆಳ್ತಂಗಡಿ ತಾಲೂಕಿನ ಅನೇಕ ಭಾಗಗಳಲ್ಲಿ ಭಾನುವಾರ ಸಂಜೆ ಗಾಳಿ, ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿದಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿಮಳೆ ನೀರು ಹರಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯ ಕೆಲವೆಡೆ ಎರಡು ಅಡಿಗಿಂತಲೂ ಹೆಚ್ಚು ನೀರು ಹರಿದ ಕಾರಣ ಟ್ರಾಫಿಕ್ ಜಾಮ್ ಉಂಟಾಯಿತು. ವಿದ್ಯುತ್ ಪೂರೈಕೆ, ಅಂತರ್ಜಾಲ ಸಂಪರ್ಕ ಕಡಿತಗೊಂಡಿತು. ಒಂದು ಗಂಟೆಗಿಂತಲೂ ಅಧಿಕ ಕಾಲ ಭಾರಿ ಮಳೆ ಸುರಿದ ಕಾರಣ ಹಳ್ಳ ಹೊಳೆಗಳು ತುಂಬಿ ಹರಿದವು.



Join Whatsapp