ಬೀದರ್: ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ. ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಮನವಿ ಮಾಡಲಾಗಿದೆ.
ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಲ್ಲಾತಹಳ್ಳಿ ಗ್ರಾಮದಲ್ಲಿ ನಿನ್ನೆ ದಲಿತರನ್ನು ದೇವಸ್ಥಾನದ ಒಳಗೆ ಬಿಡದೆ ಹೊರಗೆ ಕೂರಿಸಿ ಪೂಜೆ ಮಾಡಲಾಗಿದೆ ಎಂದು ಸವರ್ಣಿಯರು ಮತ್ತು ದಲಿತರ ಮಧ್ಯೆ ವಾಗ್ವಾದ ಉಂಟಾಗಿತ್ತು.