ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ.
ಪ್ರಕರಣ ಸಂಬಂಧ ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.