ತುಮಕೂರು | ಬಿಷ್ಣೋಯ್ ಹೆಸರಲ್ಲಿ ಸಲ್ಮಾನ್ ಖಾನ್ ಗೆ ಬೆದರಿಕೆ: ಆರೋಪಿಯ ಬಂಧನ

Prasthutha|

ತುಮಕೂರು: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ.


ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಸಲ್ಮಾನ್ ಖಾನ್ ಜೀವಂತವಾಗಿರಬೇಕಾದರೆ ನಮ್ಮ ದೇವಾಲಯಕ್ಕೆ ಬಂದು ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ. ನೀಡಬೇಕು. ಈ ರೀತಿ ಮಾಡದಿದ್ದರೆ ನಾವು ಅವರನ್ನು ಕೊಲೆ ಮಾಡುತ್ತೇವೆ, ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ಮುಂಬೈ ಪೊಲೀಸರಿಗೆ ಮೆಸೇಜ್ ಕಳುಹಿಸಿದ್ದ ಎನ್ನಲಾಗಿದೆ.

- Advertisement -


ಆರೋಪಿಯನ್ನು ಬಂಧಿಸಲಾಗಿದ್ದು ,ಹೆಚ್ಚಿನ ವಿಚಾರಣೆ ನಡೆಯುತ್ತಿದೆ.



Join Whatsapp