ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ!

Prasthutha|

ಗದಗ: ತಂದೆಯೋರ್ವ ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ.

- Advertisement -

ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವೇದಾಂತ, ಪವನ, ಧನ್ಯಾ ನದಿ ಪಾಲಾದ ಮಕ್ಕಳು.

- Advertisement -

ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡರಗಿ ಪೊಲೀಸರ ದೌಡಾಯಿಸಿದ್ದಾರೆ.



Join Whatsapp