ನಾಗಸಂದ್ರ-ಮಾದಾವರ ಮೆಟ್ರೋ ಮಾರ್ಗ ಉದ್ಘಾಟನೆ: ನಾಳೆಯಿಂದ ಸಾರ್ವಜನಿಕ ಸೇವೆ ಆರಂಭ

Prasthutha|

ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ವಿಸ್ತರಿತ ಹಸಿರು ಮಾರ್ಗ ಸಂಚಾರಕ್ಕೆ ಮುಕ್ತವಾಗಿದೆ.

- Advertisement -

ಬುಧವಾರ(ನ.6) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ತೇಜಸ್ವಿ ಸೂರ್ಯ ನಾಗಸಂದ್ರ-ಮಾದಾವರ ನಡುವೆ ಸಂಚರಿಸಿ ಸರಳವಾಗಿ ಮಾರ್ಗ ಲೋಕಾರ್ಪಣೆಗೊಳಿಸಿದ್ದಾರೆ.

ಬಳಿಕ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ನಾಗರೀಕರನ್ನು ಹೆಚ್ಚು ಸಮಯ ಕಾಯಿಸುವುದು ಸರಿಯಲ್ಲ. ಹೀಗಾಗಿ ನಾಗಸಂದ್ರ-ಮಾದಾವರ ವಿಸ್ತರಿತ ನೂತನ ಮಾರ್ಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಉದ್ಘಾಟನೆ ಮಾಡಲಾಗಿದೆ. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಈ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಯೋಜನೆಗೆ ಒಪ್ಪಿಗೆ ನೀಡಿದ್ದೆ. ಮುಂದಿನ ದಿನಗಳಲ್ಲಿ ಎಲ್ಲ ಸಂಸದರು ಹಾಗೂ ಇತರೇ ಜನಪ್ರತಿನಿಧಿಗಳನ್ನು ಆಹ್ವಾನಿಸಿ ವಿಸ್ತರಿತ ಮೆಟ್ರೋ ಮಾರ್ಗವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಲಾಗುವುದು’ ಎಂದು ತಿಳಿಸಿದರು.

- Advertisement -


ಪ್ರಸ್ತುತ ಮೆಟ್ರೋ ಹಸಿರು ಮಾರ್ಗವು 33.46 ಕಿ.ಮೀ. ಹಾಗೂ ನೇರಳೆ ಮಾರ್ಗ 40.5 ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. 2025ರ ವೇಳೆಗೆ ಸುಮಾರು 30 ಕಿ.ಮೀ ಹಾಗೂ 2026ರ ವೇಳೆಗೆ 175 ಕಿ.ಮೀ ನೂತನ ಮೆಟ್ರೋ ಮಾರ್ಗಗಳನ್ನು ಸಾರ್ವಜನಿಕರ ಸೇವೆಗೆ ನೀಡಲಾಗುವುದು ಎಂದು ಭರವಸೆ ನೀಡಿದರು.



Join Whatsapp