ನವದೆಹಲಿ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅಮಾನತುಗೊಂಡಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಅವರ ವಿರುದ್ಧದ ಆರೋಪಗಳು ಗಂಭೀರವಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.
ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವಕೀಲ ಬಾಲಾಜಿ ಶ್ರೀನಿವಾಸನ್ ಅವರು ಆರೋಪಗಳು ಗಂಭೀರವಾಗಿದ್ದರೂ, ದೂರು ಆರಂಭದಲ್ಲಿ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಅತ್ಯಾಚಾರದ ಆರೋಪಗಳ ಬಗ್ಗೆ ಮಾತನಾಡುವುದಿಲ್ಲ ಎಂದು ವಾದಿಸಿದರು.
ಆರು ತಿಂಗಳ ನಂತರ ಅರ್ಜಿಯನ್ನು ನವೀಕರಿಸಲು ಅರ್ಜಿದಾರರಿಗೆ ಅವಕಾಶ ನೀಡುವಂತೆ ವಕೀಲರು ನ್ಯಾಯಾಲಯವನ್ನು ಕೋರಿದರು. ನಾವು ಏನನ್ನೂ ಹೇಳುವುದಿಲ್ಲ ಎಂದು ಪೀಠ ಹೇಳಿದೆ.