ಸಮಾಜವನ್ನು ವಿಭಜಿಸಲು ಯತ್ನಿಸುತ್ತಿರುವವರನ್ನು ತಡೆಯಬೇಕಿದೆ: ಪ್ರಧಾನಿ ಮೋದಿ

Prasthutha|

ಅಹಮದಾಬಾದ್: ಕೆಲವರು ತಮ್ಮ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ, ಅದನ್ನು ತಡೆಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.

- Advertisement -


ಅಹಮದಾಬಾದ್ ನ ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವದ ನಿಮಿತ್ತ ಗುಜರಾತ್ ನ ಖೇಡಾ ಜಿಲ್ಲೆಯ ವಡ್ತಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾಗಿ ಅವರು ಮಾತನಾಡಿದರು.


‘2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನಾಗರಿಕರ ನಡುವೆ ಏಕತೆ ಮತ್ತು ರಾಷ್ಟ್ರದ ಸಮಗ್ರತೆ ಮುಖ್ಯವಾಗಿದೆ. ಆದರೆ, ದುರದೃಷ್ಟವಶಾತ್ ಕೆಲವರು ನಮ್ಮ ಸಮಾಜವನ್ನು ಜಾತಿ, ಧಾರ್ಮಿಕ, ಭಾಷೆ, ಪುರುಷರು-ಮಹಿಳೆಯರು, ಗ್ರಾಮ-ನಗರ ಎಂದು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ನಮ್ಮ ಉದ್ದೇಶಗಳನ್ನು ಅರ್ಥ ಮಾಡಿಕೊಂಡು ಅವರನ್ನು ಸೋಲಿಸಲು ಒಗ್ಗಟ್ಟಾಗಬೇಕು’ ಎಂದು ಪ್ರಧಾನಿ ಹೇಳಿದರು.

- Advertisement -


ಸ್ವಾಮಿನಾರಾಯಣ ಪಂಥದ ಎಲ್ಲಾ ಸಂತರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆ ಮಾಡಬೇಕು ಎಂದು ಮನವಿ ಮಾಡಿದರು.



Join Whatsapp