ಇಂಫಾಲ: ಮಣಿಪುರದ ಜಿರೀಬಾಮ್ ಜಿಲ್ಲೆಯಲ್ಲಿ 11 ಶಂಕಿತ ಉಗ್ರರು ಹತ್ಯೆಯಾದ ಒಂದು ದಿನದ ನಂತರ, ಇಂದು ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.
ಅಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ವೇಳೆ, ಶಂಕಿತ ಉಗ್ರರು ಜಕುರಾಧೋರ್ ನ ಕರೋಂಗ್ ಮಾರುಕಟ್ಟೆಯ ಸುತ್ತಮುತ್ತಲಿನ ಹಲವು ಅಂಗಡಿಗಳು ಮತ್ತು ಮನೆಗಳನ್ನು ಸುಟ್ಟು ಹಾಕಿದ್ದಾರೆ. ಜತೆಗೆ ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಅದರ ಪಕ್ಕದಲ್ಲಿರುವ ಸಿಆರ್ ಪಿಎಫ್ ಶಿಬಿರಕ್ಕೂ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಅಸ್ಸಾಂ ರೈಫಲ್ಸ್, ಸಿಆರ್ಪಿಎಫ್ ಮತ್ತು ಪೊಲೀಸರನ್ನೊಳಗೊಂಡ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.