ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

Prasthutha|

ತುಮಕೂರು: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ ಗೆ ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

- Advertisement -

ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.

ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ. ಕ್ಯಾಮೇರಾ ಮ್ಯಾನ್ ವಿನಯ್, ಹಾಗೂ ಸೋಡಿಯೋಂ ಕೊಡಿಸಿದ್ದ ಪ್ರಜ್ವಲ್ ಸಧ್ಯ ಅರೆಸ್ಟ್ ಆಗಿದ್ದಾರೆ. ಸದ್ಯ ಡ್ರೋನ್ ಪ್ರತಾಪ್ ಮೇಲೆ EXPLOSIVE SUBSTANCES ACT 1908 (u/s 3), ಹಾಗೂ 2023ರ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 288ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp