ಕಾಲ್ತುಳಿತ ಪ್ರಕರಣ: ಬಾಲಕನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಲ್ಲು ಅರ್ಜುನ್

Prasthutha|

ಹೈದರಾಬಾದ್: ಇತ್ತೀಚೆಗೆ ‘ಪುಷ್ಪ 2‘ ಚಿತ್ರದ ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆಕೆಯ 9 ವರ್ಷದ ಮಗನ ಸ್ಥಿತಿ ಗಂಭೀರವಾಗಿರುವ ಕುರಿತು ನಟ ಅರ್ಜುನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ದುರದೃಷ್ಟಕರ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೇಜ್ ಅವರ ಆರೋಗ್ಯದ ಸ್ಥಿತಿ ಬಗ್ಗೆ ತೀವ್ರ ಕಳವಳವಿದೆ. ಬಾಲಕನ ಚಿಕಿತ್ಸೆ ಸೇರಿದಂತೆ ಕುಟುಂಬದ ಅಗತ್ಯಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ’ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ‘ಈ ಕಷ್ಟದ ಸಮಯದಲ್ಲಿ ಬಾಲಕನ ಆರೋಗ್ಯದಲ್ಲಿ ಶೀಘ್ರ ಚೇತರಿಕೆ ಕಾಣಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುವೆ. ಕಾನೂನು ಪ್ರಕ್ರಿಯೆ ನಡೆಯುತ್ತಿರುವುದರಿಂದ ಬಾಲಕ ಹಾಗೂ ಆತನ ಕುಟುಂಬವನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.



Join Whatsapp