ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬಿಜೆಪಿ ನಾಯಕರು ಬಹಿರಂಗವಾಗಿ ನಿಂದಿಸುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ಧ ತೀವ್ರವಾಗಿ ಕಿಡಿಕಾರಿದರರು.
ಸಂವಿಧಾನವನ್ನು ಕಡೆಗಣಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಿರುವ ಬಿಜೆಪಿ ವಿರುದ್ಧ ನಡೆಸಬೇಕಾಗಿರುವ ಹೋರಾಟಗಳ ಬಗ್ಗೆ ಬೆಳಗಾವಿಯ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಳಗಾವಿಯಲ್ಲಿ ಮತ್ತೊಮೆ ಬೂತ, ವರ್ತಮಾನ ಮತ್ತು ಭವಿಷ್ಯದ ವಿಚಾರಗಳನ್ನು ಸಮಿಶ್ರಗೊಳಿಸಿ ದೇಶದ ರಾಜಕೀಯದ ಚರ್ಚೆ ನಡೆಯಲಿದೆ. ದೇಶದ ಇತಿಹಾಸದಲ್ಲಿ ಬೆಳಗಾವಿ ಮಹತ್ವದ ಪಾತ್ರ ವಹಿಸಿದೆ. ಮಹಾತಗಾಂಧೀಜಿಯವರು ಇಲ್ಲಿ ನಡೆದ ಮಹಾಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಸ್ವರೂಪ ಮತ್ತು ದಿಕ್ಕನ್ನು ನೀಡಿದರು. ಸ್ವಾತಂತ್ರ್ಯ ಹೋರಾಟದಿಂದ ಗಾಂಧೀಜಿ ಹೊಸ ಸಂಚಲನ ಮೂಡಿಸಿ ಅಹಿಂಸಾ ಮಾರ್ಗದ ಲ್ಲಿಯೇ ಬ್ರಿಟಿಷರನ್ನು ಓಡಿಸಿದ್ದರು. ಜಾತಿ, ಧರ್ಮ, ಭೇದವಿಲ್ಲದೆ ದೇಶದ ಎಲ್ಲರೂ ಒಂದು ಸೂತ್ರದಡಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿದರು. ಅದು ಸಾಧ್ಯವಾಗಿದ್ದು ಬೆಳಗಾವಿಯ ಅಧಿವೇಶನದ ಚರ್ಚೆಗಳಿಂದ. ನೂರು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಮಹಾ ಅಧಿವೇಶನದ ಶತಮಾನೋತ್ಸವ ನಡೆಯುತ್ತಿದ್ದು, ಗಾಂಧೀಜಿ ಪಥದಲ್ಲಿ ನಡೆಯಲು ಬೃಹತ್ ಜಾಥಾ ಆಯೋಜನೆಗೊಳಿಸಲಾಗಿದೆ. ಸಮಾಜದ ಪ್ರತಿಯೊಬ್ಬರನ್ನೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.