ಅಮಿತ್‌ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಉತ್ತಮ ಪ್ರತಿಕ್ರಿಯೆ

Prasthutha|

- Advertisement -

ಕಲಬುರಗಿ: ಸಂಸತ್‌ ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಕಲಬುರಗಿ ಬಂದ್‌ ಗೆ ಕರೆ ನೀಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಬಹುತೇಕ ಎಲ್ಲಾ ಅಂಗಡಿ ಮುಂಗಡಗಳು ಬಂದಾಗಿವೆ.

ನಗರದ ಪ್ರಮುಖ ವೃತ್ತದ ಜೇವರ್ಗಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿದರು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ. ಇನ್ನು ಸೋಮವಾರ ಕೇಂದ್ರ ಗೃಹ ಸಚಿವ ನೀಡಿರುವ ಹೇಳಿಕೆಗೆ ವಿರೋಧಿಸಿ ಈಗಾಗಲೇ ಅನೇಕ ದಲಿತ ಸಂಘಟನೆಗಳು ಸೇರಿ ಹಲವು ಪ್ರಗತಿಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದವು. ಮಂಗಳವಾರ ಬೃಹತ್‌ ಜಾಥಾ, ಪ್ರತಿಭಟನಾ ಮೆರವಣಿಗೆಗಳು ನಡೆಯಲಿವೆ.

- Advertisement -

ಬೆಳಗ್ಗೆ ಬೇರೆ ಬೇರೆ ಊರುಗಳಿಂದ ಬಂದ ಸಾರ್ವಜನಿಕರು ಆಟೋ ಸೇರಿದಂತೆ ಸಂಚಾರಿ ವಾಹನಗಳು ಸಿಗದೇ ಪಡೆದರು.



Join Whatsapp