ಮನಮೋಹನ್​ ಸಿಂಗ್ ನಿಧನ: ದೇಶಾದ್ಯಂತ 7 ದಿನ ಶೋಕಾಚರಣೆ, ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದು

Prasthutha|

- Advertisement -

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್‌ ಸಿಂಗ್‌ (92 ವರ್ಷ) ಅವರು ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.

ಡಿಸೆಂಬರ್ 26, 2024 ರಿಂದ ಜನವರಿ 1, 2025 ರವರೆಗೆ 7 ದಿನ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದ್ದು, ಮಾಜಿ ಪ್ರಧಾನಿ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಶುಕ್ರವಾರ ನಿಗದಿಯಾಗಿದ್ದ ಕೇಂದ್ರ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಈ ಸಮಯದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ರಾಷ್ಟ್ರೀಯ ಧ್ವಜ ಸಂಹಿತೆಯ ಪ್ರಕಾರ, ಶೋಕಾಚರಣೆಯ ಸಮಯದಲ್ಲಿ, ಸಂಸತ್ತು, ಸೆಕ್ರೆಟರಿಯೇಟ್, ವಿಧಾನಸಭೆ, ಇತರ ಪ್ರಮುಖ ರಾಷ್ಟ್ರೀಯ ಕಟ್ಟಡಗಳು ಅಥವಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವು ಅರ್ಧಕ್ಕೆ ಇಳಿಸಲಾಗುತ್ತದೆ. ಇದಲ್ಲದೆ, ದೇಶದ ಹೊರಗೆ ಇರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಲಿದೆ. ರಾಷ್ಟ್ರೀಯ ಶೋಕಾಚರಣೆಯ ಸಮಯದಲ್ಲಿ ಯಾವುದೇ ಅಧಿಕೃತ ಅಥವಾ ಔಪಚಾರಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದಿಲ್ಲ.



Join Whatsapp