ಬೆಂಗಳೂರು : ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಆರನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ 9 ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಮುಷ್ಕರ ನಿರತ ಸಾರಿಗೆ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದ್ದು, ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಮೂಲಕ ಕಳೆದ 8 ದಿನಗಳಲ್ಲಿ 495 ನೌಕರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯಕ್ಕೆ ಹಾಜರಾದ ನೌಕರರ ಕೆಲಸಕ್ಕೆ ಅಡ್ಡಿಪಡಿಸುವ ಹಾಗೂ ಬಸ್ ಗಳ ಮೇಲೆ ದಾಳಿ ಮಾಡುವವರ ವಿರುದ್ಧ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಮತ್ತು ಕೆಸ್ಮಾ (ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಪ್ರಯೋಗಿಸಿದೆ.