ರಾಜ್ಯದ ವಿವಿಧೆಡೆ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

Prasthutha|

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು 8 ಮಂದಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

- Advertisement -


ಅಸಮತೋಲಿತ ಆಸ್ತಿ ಸಂಗ್ರಹದ ಆರೋಪದಡಿ ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಬಳ್ಳಾರಿಯ ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ದಾಳಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ರಾಮಾಂಜನೇಯ ನಗರದಲ್ಲಿರುವ ನಿವಾಸ, ಸಂಬಂಧಿಕರು ಹಾಗೂ ಸ್ನೇಹಿತರ ನಿವಾಸದ ಮೇಲೂ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು ಚಿನ್ನಾಭರಣ, ನಗದು ಮತ್ತು ಆಸ್ತಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಖಾನಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ಗಣೇಶಪುರದ ಮನೆ, ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಈ ದಾಳಿಯಲ್ಲಿ ಭಾಗಿಯಾಗಿದ್ದಾರೆ.



Join Whatsapp