ಯಾರಾದರೂ ಶಿವಕುಮಾರ್ ಆಸ್ತಿ ಬರೆಸಿಕೊಂಡಿದ್ದಾರೆಯೇ: ಸಚಿವ ರಾಜಣ್ಣ ಪ್ರಶ್ನೆ

Prasthutha|

ತುಮಕೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜಾರಾಗಲು ಯಾರಾದರು ಅವರ ಆಸ್ತಿ ಬರೆಸಿಕೊಂಡಿದ್ದಾರೆಯೇ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರಶ್ನಿಸಿದರು.

- Advertisement -

ಮುಖ್ಯಮಂತ್ರಿ ಮತ್ತು ಸಚಿವರ ಡಿನ್ನರ್ ಸಭೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬೇಜಾರಾಗಿ, ಹೈಕಮಾಂಡ್‌ಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ‘ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದವರಿಗೆ ಹಾಸ್ಟೆಲ್ ಪ್ರವೇಶ ನೀಡುತ್ತಿಲ್ಲ. ಇಂತಹ ಸಮಸ್ಯೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಸಭೆ ಮಾಡಬೇಡಿ ಎಂದರೆ ಇವರು ಪರಿಶಿಷ್ಟ ಸಮುದಾಯದ ವಿರೋಧಿಗಳೇ? ಇದು ಬಹಳ ದಿನ ನಡೆಯುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ವಿದ್ಯಾರ್ಥಿಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದ ಸಭೆಗೆ ರಾಜಕೀಯ ಲೇಪನ ಕೊಟ್ಟು, ವಿರೋಧ ವ್ಯಕ್ತಪಡಿಸುವುದು ಪರಿಶಿಷ್ಟ ಸಮುದಾಯಗಳಿಗೆ ಮಾಡುವ ಅನ್ಯಾಯ ಎಂದು ಕಿಡಿಕಾರಿದರು.

ಈಚೆಗೆ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಡೆದ ಸಭೆಯಿಂದ ಪಕ್ಷದಲ್ಲಿ ಗೊಂದಲ ಮೂಡಿದೆ. ಅದರ ಜತೆಗೆ ಮತ್ತೊಂದು ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಹೈಕಮಾಂಡ್ ನಾಯಕರು ಸಭೆ ಮುಂದೂಡುವಂತೆ ಹೇಳಿದ್ದಾರೆ. ಅದಕ್ಕಾಗಿ ಸಭೆ ಮುಂದೂಡಲಾಗಿದೆ. ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಫೆ. 13ರಂದು ಚಾಮರಾಜನಗರದಲ್ಲಿ ಸಚಿವ ಸಂಪುಟದ ಸಭೆ ನಡೆಯಲಿದೆ. ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎನ್ನುತ್ತಿದ್ದರು. ಈಗ ಅಲ್ಲಿಯೇ ಸಚಿವ ಸಂಪುಟ ಸಭೆ ನಡೆಸಲಾಗುವುದು. ಸಚಿವ ಸಂಪುಟಕ್ಕೂ ಮುನ್ನ ಅಥವಾ ಸಭೆಯ ನಂತರ ಎಸ್.ಸಿ, ಎಸ್.ಟಿ ಸಚಿವರು, ಶಾಸಕರ ಸಭೆ ನಡೆಸಲಾಗುವುದು ಎಂದು ಹೇಳಿದರು.



Join Whatsapp