ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾದ 6 ಮಂದಿ ನಕ್ಸಲರು

Prasthutha|

- Advertisement -

ಗೃಹ ಕಚೇರಿ ಕೃಷ್ಣಾದಲ್ಲಿ ಶಸ್ತ್ರ ತ್ಯಾಗ

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ.

- Advertisement -

ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್, ಜಿಶಾ ಶರಣಾದ ನಕ್ಸಲರು. ಪೊಲೀಸ್ ಭದ್ರತೆಯೊಂದಿಗೆ ನಕ್ಸಲರನ್ನು ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಸಂಜೆ ಹೊತ್ತಿಗೆ ಕರೆತರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಡಿಜಿಪಿ ಅಲೋಕ್ ಮೋಹನ್ ಸಮ್ಮುಖದಲ್ಲಿ ನಕ್ಸಲರು ಸಿಎಂ ಮುಂದೆ ಶರಣಾಗತಿ ಪ್ರಕ್ರಿಯೆ ನಡೆಯಿತು. 6 ಮಂದಿ ನಕ್ಸಲರು ಶಸ್ತ್ರ ತ್ಯಜಿಸಿ ಶರಣಾದರು. ಈ ವೇಳೆ ನಕ್ಸಲರ ಜೊತೆ ಅವರ ಕುಟುಂಬಸ್ಥರು ಸಹ ಹಾಜರಿದ್ದರು



Join Whatsapp