ಸಾವರ್ಕರ್ ಮಾನನಷ್ಟ ಪ್ರಕರಣ; ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಜಾಮೀನು

Prasthutha|

- Advertisement -

ನವದೆಹಲಿ: ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ಲಂಡನ್​ನಲ್ಲಿ ನೀಡಲಾದ ಭಾಷಣದಲ್ಲಿ ಸಾವರ್ಕರ್ ಮತ್ತು ಕೆಲವು ಸ್ನೇಹಿತರು ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ ಘಟನೆಯ ಬಗ್ಗೆ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಹೇಳಿದ್ದರು.

- Advertisement -

ಆದರೆ, ಸಾವರ್ಕರ್ ಸೋದರಳಿಯ ಸತ್ಯಕಿ ಸಾವರ್ಕರ್ ಈ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದರು. ಅವುಗಳನ್ನು “ಕಾಲ್ಪನಿಕ, ಸುಳ್ಳು ಮತ್ತು ದುರುದ್ದೇಶಪೂರಿತ” ಎಂದು ಕರೆದಿದ್ದರು. ಅಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ಸಾವರ್ಕರ್ ಈ ರೀತಿ ಏನನ್ನೂ ಬರೆದಿಲ್ಲ ಎಂದು ಅವರು ಪ್ರತಿಪಾದಿಸಿದ್ದರು. ರಾಹುಲ್ ಗಾಂಧಿಯವರ ಹೇಳಿಕೆಗಳು ನಮ್ಮ ಪ್ರತಿಷ್ಠೆಗೂ ಧಕ್ಕೆ ತರುತ್ತಿವೆ ಎಂದು ಸತ್ಯಕಿ ಸಾವರ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಆ ದೂರಿನ ನಂತರ, ಪುಣೆ ನ್ಯಾಯಾಲಯವು ಪೊಲೀಸರಿಗೆ ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿತು.

ಲೋಕಸಭೆಯ ವಿರೋಧ ಪಕ್ಷದ ನಾಯಕ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ನಂತರ, ನ್ಯಾಯಾಲಯವು 25,000 ರೂ.ಗಳ ಶ್ಯೂರಿಟಿ ಬಾಂಡ್ ಮೇಲೆ ಅವರಿಗೆ ಜಾಮೀನು ನೀಡಿದೆ. ಹಿರಿಯ ಕಾಂಗ್ರೆಸ್ ನಾಯಕ ಮೋಹನ್ ಜೋಶಿ ನ್ಯಾಯಾಲಯದ ಮುಂದೆ ಶ್ಯೂರಿಟಿಯಾಗಿ ನಿಂತರು.



Join Whatsapp