ಆಶಾ ಕಾರ್ಯಕರ್ತೆಯರ ಗೌರವಧನ 10 ಸಾವಿರ ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

Prasthutha|

- Advertisement -

ಮೈಸೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.

- Advertisement -

ಆಶಾ ಕಾರ್ಯಕರ್ತೆಯರೊಂದಿಗೆ ನಮ್ಮ ಸಂಧಾನಸಭೆ ಯಶಸ್ವಿಯಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ವಹಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಿಂಗಳಿಗೆ 15 ಸಾವಿರ ಗೌರವ ಧನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಕೂಡಲೇ 12 ಸಾವಿರ ಗೌರವ ಧನ ನಿಗದಿ ಪಡಿಸಿ ಬಳಿಕ ಹಂತ ಹಂತವಾಗಿ ಮೂರು ಸಾವಿರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದರು.



Join Whatsapp