ಮುಡಾ ಹಗರಣದಲ್ಲಿ ಜೆಡಿಎಸ್​ ಶಾಸಕ ಜಿಟಿ ದೇವೇಗೌಡಗೂ ಸಂಕಷ್ಟ: ಸ್ನೇಹಮಯಿ ಕೃಷ್ಣ ದೂರು

Prasthutha|

- Advertisement -

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಪುತ್ರಿ ಮತ್ತು ಅಳಿಯನಿಗೆ ನಿವೇಶನ ಕೊಡಿಸಿದ್ದಾರೆ ಎಂದು ಆರೋಪಿಸಿ ಆರ್​ಟಿಐ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. ಬಳಿಕ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆ.ಚೌಡಯ್ಯ ಎಂಬುವವರ ಹೆಸರಿಗೆ 50:50 ಅನುಪಾತದಲ್ಲಿ ಒಟ್ಟು ಆರು ನಿವೇಶನಗಳನ್ನು ಅಕ್ರಮವಾಗಿ ಕೊಡಿಸಿದ್ದಾರೆ. ಇದರಲ್ಲಿ, 50X80 ಅಡಿ ಅಳತೆಯ ಎರಡು ನಿವೇಶನಗಳನ್ನು, ಅವರ ಮಗಳು ಡಿ.ಅನ್ನಪೂರ್ಣ ಮತ್ತು ಅಳಿಯ ಜಿ.ಎಂ.ವಿಶ್ವೇಶ್ವರಯ್ಯನವರ ಹೆಸರಿಗೆ ಮಾಡಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.



Join Whatsapp