ಹಸುಗಳ ಕೆಚ್ಚಲು ಕೊಯ್ದ ಕೇಸ್: ಮಾಲೀಕರ ಕುಟುಂಬಕ್ಕೆ 3 ಹಸು ಕೊಡಿಸಿದ ಸಚಿವ ಝಮೀರ್

Prasthutha|

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕರಿಗೆ ಸಚಿವ ಜಮೀರ್ ಅಹ್ಮದ್ ಮೂರು ಹಸುಗಳನ್ನು ಕೊಡಿಸಿದ್ದಾರೆ.

- Advertisement -

ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.

ಈ ವೇಳೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.



Join Whatsapp