ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಲಾಗಿದೆ.
ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು (ಜನವರಿ 16) ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ.
ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.