ಜುಕರ್‌ಬರ್ಗ್‌ ಹೇಳಿಕೆಗೆ ಕ್ಷಮೆ ಕೇಳಿದ ಮೆಟಾ; ಈ ವಿಚಾರ ಇಲ್ಲಿಗೆ ಮುಕ್ತಾಯ: ನಿಶಿಕಾಂತ್‌ ದುಬೆ

Prasthutha|

ನವದೆಹಲಿ: ಫೇಸ್‌ ಬುಕ್‌ ಕಂಪನಿಯ ಮಾತೃಸಂಸ್ಥೆ ಮೆಟಾ ಕ್ಷಮೆಯಾಚನೆ ಮಾಡಿದ ಬೆನ್ನಲ್ಲೇ ಈ ವಿಚಾರವನ್ನು ಇಲ್ಲಿಗೆ ಮುಗಿಸುತ್ತೇವೆ ಎಂದು ಬಿಜೆಪಿ ಸಂಸದ ಮತ್ತು ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಅಧ್ಯಕ್ಷ ನಿಶಿಕಾಂತ್ ದುಬೆ ಹೇಳಿದ್ದಾರೆ.

- Advertisement -

ಪಾಡ್‌ಕಾಸ್ಟ್ ಒಂದರಲ್ಲಿ ಮಾತನಾಡಿದ್ದ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ ಅವರು ಕೋವಿಡ್ ಸಾಂಕ್ರಾಮಿಕದ ಬಳಿಕ ಭಾರತ ಸೇರಿದಂತೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಸರ್ಕಾರಗಳು 2024ರ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿದ್ದರು.

ಈ ಹೇಳಿಕೆಗೆ ಭಾರತದಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವನಾಥ್ ಥುರ್ಕಲ್‌ ಅವರು ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಉದ್ದೇಶಪೂರ್ವಕವಲ್ಲದ ಈ ತಪ್ಪಿಗಾಗಿ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದಾರೆ.

- Advertisement -

2024 ರ ಚುನಾವಣೆಯಲ್ಲಿ ಅನೇಕ ಅಧಿಕಾರದಲ್ಲಿರುವ ಪಕ್ಷಗಳು ಮರು ಆಯ್ಕೆಯಾಗಲಿಲ್ಲ ಎಂಬ ಮಾರ್ಕ್ ಜುಕರ್‌ಬರ್ಗ್‌ ಅವರ ಅಭಿಪ್ರಾಯವು ಹಲವಾರು ದೇಶಗಳಿಗೆ ನಿಜವಾಗಿದೆ. ಆದರೆ ಈ ಹೇಳಿಕೆ ಭಾರತಕ್ಕೆ ಅಲ್ಲ. ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದಾರೆ.



Join Whatsapp