ಅಶ್ಲೀಲಕ್ಕೂ ಒಂದು ಮಿತಿ ಇರಬೇಕು, ಇದು ಎಲ್ಲಾ ಮೀರಿದೆ: ಪ್ರಜ್ವಲ್​ಗೆ ಹೈಕೋರ್ಟ್‌ ಚಾಟಿ

Prasthutha|

ಬೆಂಗಳೂರು: ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ.

- Advertisement -

ಅಲ್ಲದೇ ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿದ. ಇದರಿಂದ ಪ್ರಜ್ವಲ್​ಗೆ ಹಿನ್ನಡೆಯಾಗಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಗದೀಶ್, ಈಗಾಗಲೇ ಎಲ್ಲಾ ವಿಡಿಯೋ ಫೋಟೋ ನೀಡಲಾಗಿದೆ. ಪ್ರಕರಣ ವಿಳಂಬ ಮಾಡುವುಕ್ಕೆ ಕೋರ್ಟ್ ಗಳಲ್ಲಿ ಈ ರೀತಿ ಅರ್ಜಿ ಹಾಕಲಾಗುತ್ತಿದೆ. ಕೆಳಹಂತದ ನ್ಯಾಯಾಲಯದಲ್ಲೂ ಕೂಡ ಸಿಡಿಆರ್ ಕೇಳಿ ಅರ್ಜಿ ಹಾಕಿದ್ದಾರೆ ಎಂದು ವಾದ ಮಂಡಿಸಿದರು.

- Advertisement -

ವಾದವನ್ನು ಆಲಿಸಿದ ಕೋರ್ಟ್, ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು. ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ? ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ಕೋರ್ಟ್​ ಪ್ರಶ್ನಿಸಿದೆ.



Join Whatsapp