ಪ್ರತ್ಯೇಕ ಅಪಘಾತ: ದ.ಕ ಜಿಲ್ಲೆಯಲ್ಲಿ ಒಂದೇ ದಿನ 3 ಮಂದಿ ಮೃತ್ಯು..!

Prasthutha|

ಕಡಬ, ಧರ್ಮಸ್ಥಳ, ಕೊಣಾಜೆ ಹೆದ್ದಾರಿಯಲ್ಲಿ ಭೀಕರ ಅಪಘಾತ

- Advertisement -


ಮಂಗಳೂರು: ದ.ಕ ಜಿಲ್ಲೆಯಲ್ಲಿ ಒಂದೇ ದಿನ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿವೆ. ದುರದೃಷ್ಟವಶಾತ್ ಜಿಲ್ಲೆ ಮೂರು ಭಾಗಗಳಲ್ಲಿ ರಸ್ತೆ ಅಪಘಾತ ಉಂಟಾಗಿದೆ.


ಮೋರಿಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು

- Advertisement -

ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.


ನಿಯಂತ್ರಣ ತಪ್ಪಿ ಉರುಳಿಬಿದ್ದ ಬೈಕ್: ಸವಾರ ಮೃತ್ಯು
ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕಲ್ಮಂಜ ನಿಡಿಗಲ್ ಸಮೀಪ ನಡೆದಿದೆ.
ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(25) ಮೃತಪಟ್ಟವರು.
ಯಾವುದೋ ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ತೆರಳಿದ್ದ ಮಿಥುನ್ ಕರ್ಕೇರ ಅಲ್ಲಿಂದ ರಾತ್ರಿ ಹಿಂದಿರುಗುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರಸ್ತೆಗೆ ಉರುಳಿಬಿದ್ದಿದೆ.

ಸ್ಕೂಟರ್- ಟೆಂಪೊ ಮಧ್ಯೆ ಅಪಘಾತ: ಸವಾರ ಮೃತ್ಯು
ದ್ವಿಚಕ್ರ ವಾಹನ ಮತ್ತು ಏಸ್ ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕರ್ ಸಿದ್ದೀಕ್(22) ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೊ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ್ದು, ನಜ್ಜುಗುಜ್ಜಾಗಿದೆ.



Join Whatsapp