ಉಳ್ಳಾಲ: ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ನಗ-ನಗದು ದರೋಡಗೈದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ.
ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸ್ಪೀಕರ್ ಯುಟಿ ಖಾದರ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.