ಮುಡಾ ಕೇಸ್‌ ನಲ್ಲಿ ಸಿದ್ದರಾಮಯ್ಯ ರಾಜೀನಾಮೆ ಅವಶ್ಯಕತೆ ಇಲ್ಲ; ಸಿಎಂ ಪರ ಜಿಟಿಡಿ ಬ್ಯಾಟಿಂಗ್

Prasthutha|

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಚರ್ಚೆ ಬೆನ್ನಲ್ಲೆ ಶಾಸಕ ಜಿಟಿ ದೇವೇಗೌಡ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಇ ಡಿಯಿಂದ ಮುಡಾ ಆಸ್ತಿ ಜಪ್ತಿ ವಿಚಾರದಲ್ಲಿ ಸಿದ್ದರಾಮಯ್ಯ ಪರ ಜಿ ಟಿ ದೇವೇಗೌಡ ನಿಂತಿದ್ದಾರೆ.

- Advertisement -

50:50 ಅನುಪಾತ ಎಲ್ಲೆಡೆ ಚಾಲ್ತಿಯಲ್ಲಿದೆ. 3 ಪಕ್ಷಗಳು ಮುಡಾ ಬೋರ್ಡ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದಾರೆ. ಯಾವ ಜನಪ್ರತಿನಿಧಿ ಕೂಡ 50:50 ಅನುಪಾತ ಬೇಡ ಎಂದಿಲ್ಲ. ಲ್ಯಾಂಡ್ ಟು ಲ್ಯಾಂಡ್ ಕೊಡಬೇಕು ಅಂತ ಮರೀತಿಬ್ಬೇಗೌಡ ಮಾತ್ರ ಹೋರಾಟ ಮಾಡಿದ್ದಾರೆ. ಇ ಡಿ ಸೀಜ್ ಮಾಡಿದ್ದೇವೆ ಅಂತ ಹೇಳಿದ್ದಾರೆ. ಆರೋಪ ಸಾಬೀತಾಗುವವರೆಗೂ ರಾಜೀನಾಮೆ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಯಾವ ಪಕ್ಷದ ಯಾವ ನಾಯಕರ ಮೇಲೆ ಎಷ್ಟು ಎಫ್ಐಆರ್ ಗಳಿವೆ ಗೊತ್ತಾ? ಸಿದ್ದರಾಮಯ್ಯ ರಾಜೀನಾಮೆ ಯಾಕೆ ಕೊಡಬೇಕು. ನ್ಯಾಯಾಲಯದ ತೀರ್ಮಾನ ಬರಲಿ. ಆಮೇಲೆ ನೋಡೋಣಾ, ತಮ್ಮ ಪಕ್ಷದಲ್ಲಿ ಯಾರ ಮೇಲೆ ಎಷ್ಟು ಎಫ್ಐಆರ್ ಗಳಿವೆ ಎಂಬುದನ್ನು ನಾಯಕರುಗಳು ಮೊದಲು ನೋಡಿಕೊಂಡು ‌ನಂತರ ಸಿದ್ದರಾಮಯ್ಯರ ರಾಜೀನಾಮೆ ಕೇಳಲಿ ಎಂದು ಹೇಳಿದರು.



Join Whatsapp