ನವದೆಹಲಿ: ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮವು ಹೆಣ್ಣು ಮಕ್ಕಳಿಗೆ ಶಿಕ್ಷಣದ ಹಕ್ಕು ಜತೆಗೆ ಗೌರವವನ್ನು ಒದಗಿಸುವ ಮೂಲಕ ಹೊಸ ಆಯಾಮವನ್ನೇ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ: ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮವು ಹೆಣ್ಣು ಮಕ್ಕಳಿಗೆ ಶಿಕ್ಷಣದ ಹಕ್ಕು ಜತೆಗೆ ಗೌರವವನ್ನು ಒದಗಿಸುವ ಮೂಲಕ ಹೊಸ ಆಯಾಮವನ್ನೇ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಶ್ಲಾಘಿಸಿದ್ದಾರೆ.
‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮವು ಇಂದು ಸಾಮೂಹಿಕ ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಶಾ ಸಂತಸ ವ್ಯಕ್ತಪಡಿಸಿದ್ದಾರೆ.
‘ಇಂದು ಶಾಲೆಗಳಲ್ಲಿ ಹೆಣ್ಣು ಮಕ್ಕಳ ದಾಖಲಾತಿ ಪ್ರಮಾಣದಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಲಿಂಗಾನುಪಾತದಲ್ಲಿ ಅಭೂತಪೂರ್ವ ಸುಧಾರಣೆಯಾಗಿದೆ. ಹೆಣ್ಣುಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಮುಖ ಪಾತ್ರವಹಿಸುವ ಮೂಲಕ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸುತ್ತಿದ್ದಾರೆ” ಎಂದು ಶಾ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.