ಜೀವ ಉಳಿಸಿದ ಆಟೋ ಚಾಲಕನನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ ಸೈಫ್ ಅಲಿ ಖಾನ್

Prasthutha|

ಮುಂಬೈ: ನಟ ಸೈಫ್ ಅಲಿ ಖಾನ್‌ ಮೇಲೆ ಹಲ್ಲೆ ಆಗಿದ್ದ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಜೀವ ಉಳಿಸಿದ ಆಟೋ ಚಾಲಕನಿಗೆ ಧನ್ಯವಾದ ತಿಳಿಸಿದ್ದಾರೆ.

- Advertisement -

ಆಟೋ ಚಾಲಕ ಮತ್ತು ಸೈಫ್ ಭೇಟಿಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಿನ್ನೆ (ಜ.21) ಲೀಲಾವತಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗುವ ಮುನ್ನ ಆಟೋ ಚಾಲಕ ಭಜನ್ ಸಿಂಗ್‌ರನ್ನು ಸೈಫ್ ಭೇಟಿಯಾಗಿ ಥ್ಯಾಂಕ್ಯೂ ಹೇಳಿದ್ದಾರೆ. ಗಾಯಗೊಂಡಿದ್ದ ತಮ್ಮನ್ನು ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನನ್ನು ಕರೆಸಿ ಧನ್ಯವಾದ ತಿಳಿಸಿದ್ದಲ್ಲದೇ, ಮುಂದೆ ನಿಮಗೆ ಏನೇ ಸಹಾಯ ಬೇಕೆಂದರು ತಮ್ಮನ್ನು ಸಂಪರ್ಕಿಸುವಂತೆ ಸೈಫ್ ತಿಳಿಸಿದ್ದಾರೆ ಎನ್ನಲಾಗಿದೆ.

- Advertisement -

ಅಂದಹಾಗೆ, ಜ.16ರ ಬೆಳಗಿನ ಜಾವ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿತ್ತು. ಮನೆಯಲ್ಲಿ ಯಾವುದೇ ಕಾರ್ ಲಭ್ಯವಿರದ ಕಾರಣ, ಗಾಯಗೊಂಡಿದ್ದ ನಟನನ್ನು ಆಟೋ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ, ಆಟೋ ಚಾಲಕ ಯಾವುದೇ ಶುಲ್ಕ ಪಡೆಯದೇ ಹಿಂದಿರುಗಿದ್ದರು.



Join Whatsapp