ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿ ಪಾವರ್ತಿಗೆ ಬಿಗ್ ರಿಲೀಫ್; ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ ಚಿಟ್?

Prasthutha|

ಬೆಂಗಳೂರು: ಮುಡಾ ಪ್ರಕರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ.

- Advertisement -

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಟಿ.ಎಸ್ ಶ್ರೀವತ್ಸ ಅವರು, ಹಗರಣದಲ್ಲಿ ಸಿದ್ದರಾಮಯ್ಯ, ಪಾರ್ವತಿ ಅವರ ತಪ್ಪಿಲ್ಲ ಅಂತ ಲೋಕಾಯುಕ್ತ ಬಿ ರಿಪೋರ್ಟ್ ಹಾಕಲು ಮುಂದಾಗಿದೆ. ಯಾವ ರೀತಿ ತನಿಖೆ ಮಾಡಿದ್ದಾರೋ ಗೊತ್ತಿಲ್ಲ. ನಾನು ಮೊದಲಿನಿಂದಲೂ ಹೇಳಿದ್ದೇನೆ., ಲೋಕಾಯುಕ್ತದಲ್ಲಿ ನ್ಯಾಯಯುತ ತನಿಖೆ ಆಗಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಕೆಳಗಡೆ ಕೆಲಸ ಮಾಡುವ ಅಧಿಕಾರಿಗಳು ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ  ಅಂತ ಹೇಗೆ ಹೇಳ್ತಾರೆ? ಪಾರ್ವತಿ ಅವರ ಮೇಲೆ ನಮಗೆ ಗೌರವವಿದೆ, ಆದ್ರೆ ಅವರ ವಿಚಾರಣೆ ಗುಪ್ತ ಸ್ಥಳದಲ್ಲಿ ಆಗಿದೆ. ಲೋಕಾಯುಕ್ತ ರಿಪೋರ್ಟ್ ಕೊಡಲಿ… ನಮ್ಮ ಕಾನೂನು ಹೋರಾಟ ಮುಂದುವರೆಯುತ್ತದೆ ಎಂದರು.

- Advertisement -

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗಿದೆ.

ಮುಡಾ ಪ್ರಕರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.



Join Whatsapp