ಮಂಗಳೂರಿನಲ್ಲಿ ಸಲೂನ್ ಮೇಲೆ ದಾಳಿ ಪ್ರಕರಣ: ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪರಮೇಶ್ವರ್ ಸೂಚನೆ

Prasthutha|

ಉಡುಪಿ: ಬಿಜೈ ಬಳಿಯ ಕಲರ್ಸ್ ಸಲೂನ್ ಮೇಲೆ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಉಡುಪಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.


ಅನೈತಿಕ ಚಟುವಟಿಕೆ ನಡೆಸುವ ಪಾರ್ಲರ್ ಗಳಿದ್ದರೆ ದೂರು ಕೊಡಿ. ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾರ್ಪೊರೇಷನ್ ನವರು ಟ್ರೇಡ್ ಲೈಸೆನ್ಸ್ ಕೊಟ್ಟಿರುತ್ತಾರೆ. ಯಾವ ಕಂಡೀಷನ್ ಹಾಕಿ ಕೊಟ್ಟಿರ್ತಾರೆ ಅದನ್ನು ಪಾಲಿಸದಿದ್ದರೆ, ನಿಯಮಾವಳಿಗಳನ್ನು ಮೀರಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ.



Join Whatsapp