ಮುಂಬೈ: ಮಹಾರಾಷ್ಟ್ರಕ್ಕೆ ಮೂರನೇ ಉಪಮುಖ್ಯಮಂತ್ರಿ ಬರಲಿದ್ದಾರೆ. ಶಿವಸೇನೆ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಶುಕ್ರವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸಂಸದ, ತೆರೆಮರೆಯ ಚಟುವಟಿಕೆಗಳನ್ನು ನೋಡಿದರೆ ಭವಿಷ್ಯದಲ್ಲಿ ರಾಜ್ಯಕ್ಕೆ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.
“ಏಕನಾಥ್ ಶಿಂಧೆ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು. ಏಕೆಂದರೆ ಅವರು ಉಪಮುಖ್ಯಮಂತ್ರಿ. ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದರು. ಈಗ ಅದೇ ಪಕ್ಷದಿಂದ ಮೂರನೇ ಉಪಮುಖ್ಯಮಂತ್ರಿ ನೇಮಕ ವಾಗುತ್ತಿರುವುದರಿಂದ ಅವರು ನಾಳೆ ಡಿಸಿಎಂ ಆಗಿ ಇರುವುದಿಲ್ಲ. ಅವರು (ಶಿಂಧೆ) ಇದರ ಬಗ್ಗೆ ಯೋಚಿಸಬೇಕು” ಎಂದಿದ್ದಾರೆ.