ರಾಜ್ಯಪಾಲರ ಸರ್ವಪಕ್ಷ ಸಭೆ ಬಳಿಕ ರಾಜ್ಯದಲ್ಲಿ ‘ಟಫ್ ರೂಲ್ಸ್’ ಜಾರಿ : ಸಚಿವ ಆರ್. ಅಶೋಕ್

Prasthutha|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿದ್ದು, ರಾಜ್ಯಪಾಲರ ಸಭೆ ಮುಗಿದ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯಪಾಲರು ಇಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕರು, ಅಧಿಕಾರಿಗಳು, ಸಚಿವರುಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

 ಈ ವೇಳೆ ಜನಪ್ರತಿನಿಧಿಗಳ ಸಭೆಯ ಅಭಿಪ್ರಾಯ, ಕೊರೊನಾ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಅಭಿಪ್ರಾಯವನ್ನು ಮುಂದಿಟ್ಟುಕೊಂಡು ಚರ್ಚೆ ನಡೆಯಲಿದೆ. ಬಳಿಕ ಯಾವ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧರಿಸುತ್ತಾರೆ. ಇಂದು ಸಂಜೆ ಈ ಬಗ್ಗೆ ಸ್ಪಷ್ಟ ಮಾರ್ಗಸೂಚಿಯನ್ನು ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.



Join Whatsapp