ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 482 ಕೋವಿಡ್ ಪಾಸಿಟಿವ್ ಪ್ರಕರಣಗಳು : 48 ಲಕ್ಷಕ್ಕೂ ಅಧಿಕ ದಂಡ ವಸೂಲಿ !

Prasthutha|

ಮಂಗಳೂರು : ದಕ್ಷಿಣ ಕನ್ನದ ಜಿಲ್ಲೆಯಲ್ಲಿ ಮಂಗಳವಾರದಂದು ಒಟ್ಟು 482 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 88 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಗೆ ಇದುವರೆಗೆ ಬಲಿಯಾದವರ ಸಂಖ್ಯೆ 744 ಆಗಿದ್ದು, ನಿನ್ನೆ ಯಾವುದೇ ರೋಗಿಗಳು ಮೃತಪಟ್ಟಿಲ್ಲ ಎಂದು ವರದಿಗಳು ತಿಳಿಸಿದೆ.

- Advertisement -

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 38843 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಸದ್ಯಕ್ಕೆ 2275 ಸಕ್ರಿಯ ಪ್ರಕರಣದ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸದ, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸದ ಸಾರ್ವಜನಿಕರಿಂದ ಇದುವರೆಗೆ ಒಟ್ಟು  48 ಲಕ್ಷದ 25 ಸಾವಿರದ 830 ರೂಪಾಯಿಗಳ ದಂಡ ವಸೂಲಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತದ ವರದಿಗಳು ತಿಳಿಸಿದೆ.



Join Whatsapp