ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ | ಇಲ್ಲಿದೆ ವಿವರ…

Prasthutha|

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ.

- Advertisement -

ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ, ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.

ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ಗೆ ಅವಕಾಶವಿದೆ. ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.

- Advertisement -

ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಖಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದ್ದು, ಈ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ.



Join Whatsapp