‘ಆಮ್ಲಜನಕ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲು ಶಿಕ್ಷೆ’ : ದೆಹಲಿ ಹೈಕೋರ್ಟ್‌ ಎಚ್ಚರಿಕೆ

Prasthutha|

 ದೇಶದಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನ ರೋಗಿಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಆಡಳಿತದ ಯಾವುದೇ ಅಧಿಕಾರಿ ಅಡ್ಡಿಪಡಿಸಿದಲ್ಲಿ ಆ ವ್ಯಕ್ತಿಯನ್ನು ಗಲ್ಲಿಗೇರಿಸಲಾಗುವುದು” ಎಂದು ಶನಿವಾರ ದೆಹಲಿ ಹೈಕೋರ್ಟ್‌ ತಿಳಿಸಿದೆ.

- Advertisement -

ಕೊರೊನಾ ರೋಗಿಗಳಿಗೆ ಆಮ್ಲಜನಕದ ಕೊರತೆ ಉಂಟಾಗಿರುವ ಬಗ್ಗೆ ನ್ಯಾಯಾಲಯಕ್ಕೆ ಮಹಾರಾಜ ಅಗ್ರಸೇನ್‌ ಆಸ್ಪತ್ರೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ವಿಪಿನ್‌ ಸಂಘಿ ಹಾಗೂ ರೇಖಾ ಪಲ್ಲಿ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದ್ದು, “ಆಮ್ಲಜನಕ ಸರಬರಾಜಿಗೆ ಯಾರು ಅಡ್ಡಿಪಡಿಸುತ್ತಾರೆ ಎನ್ನುವುದನ್ನು ತಿಳಿಸಿ” ಎಂದು ನ್ಯಾಯಾಲಯ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ.

“ಆಮ್ಲಜನಕ ಪೂರೈಕೆಗೆ ಅಡ್ಡಿಯುಂಟು ಮಾಡುವವರನ್ನು ಗಲ್ಲಿಗೇರಿಸುತ್ತೇವೆ. ನಾವು ಯಾರನ್ನೂ ಬಿಡುವುದಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

- Advertisement -

ಸ್ಥಳೀಯ ಆಡಳಿತದ ಅಧಿಕಾರಿಗಳ ಬಗ್ಗೆ ಕೇಂದ್ರಕ್ಕೆ ತಿಳಿಸುವಂತೆ ನ್ಯಾಯಾಲಯ ದೆಹಲಿ ಸರ್ಕಾರಕ್ಕೆ ತಿಳಿಸಿದ್ದು, “ಅವರ ಬಗ್ಗೆ ಕೇಂದ್ರವೂ ಕ್ರಮ ಕೈಗೊಳ್ಳಬಹುದು” ಎಂದು ಈ ಸಂದರ್ಭದಲ್ಲಿ  ಹೇಳಿದೆ.



Join Whatsapp