ನಾಗ್ಪುರ : ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅನಿಲ್ ದೇಶ್ಮುಖ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಸಿಬಿಐ ತಂಡ ನಾಗ್ಪುರದಲ್ಲಿರುವ ಸಿವಿಲ್ ಲೈನ್ಸ್ ಪ್ರದೇಶದ ಜಿಪಿಒ ಚೌಕದಲ್ಲಿರುವ ಸಚಿವರ ನಿವಾಸದಲ್ಲಿ ಶೋಧ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ
ಸಚಿವರ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿರುವ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಸಿಬಿಐ ಪ್ರಾಥಮಿಕ ತನಿಖೆ ನಡೆಸಿ ದೇಶ್ಮುಖ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ದೇಶ್ಮುಖ್ ಅವರ ಮುಂಬೈನ ನಿವಾಸ ಮತ್ತಿತರ ಸ್ಥಳಗಳಲ್ಲೂ ಸಿಬಿಐ ಶೋಧಕಾರ್ಯ ನಡೆಸಿದೆ.