ರಾಜ್ಯದಲ್ಲಿ ಕೋವಿಡ್ ನಿಂದ ಅತಿಹೆಚ್ಚಿನ ಸಂಖ್ಯೆಯ ಮಂದಿ ಬೆಂಗಳೂರಲ್ಲಿ ಸಾವನ್ನಪ್ಪುತ್ತಿದ್ದಾರೆ. ಅದಕ್ಕೆ ಆಕ್ಸಿಜನ್ ಕಾರಣ ಎಂದು ಸರ್ಕಾರ ಒಪ್ಪಿಕೊಂಡಿದೆ. ಆದರೆ ಆಕ್ಸಿಜನ್ ಗೆ ಬೇಕಾದ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡನ್ನು ತಡೆಯಲು ಆಗುತ್ತಿಲ್ಲ. ಬೆಂಗಳೂರಲ್ಲಿ ಇವತ್ತು 150 ಕ್ಕಿಂತಲೂ ಹೆಚ್ಚಿನ ಮಂದಿ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಆಕ್ಸಿಜನ್ ಕಾರಣ ಎಂದರು. ಆಕ್ಸಿಜನ್ ನ್ನು ಕೇಂದ್ರ ಸರ್ಕಾರದಿಂದ ಪಡೆಯಲು ನಮ್ಮ ಕೇಂದ್ರ ಸಚಿವರು, ಸಂಸದರು ಯಾವುದೇ ಪ್ರಯತ್ನ ಮಾಡುತ್ತಿಲ್ಲ.
ಸ್ಮಶಾನಕ್ಕೆ ಎಷ್ಟು ಮಂದಿ ಹೋಗಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆಯೇ ಹೊರತು ಈ ರೋಗವನ್ನು ನಿಯಂತ್ರಿಸಲು ಬೇಕಾದ ವ್ಯವಸ್ಥೆ ಮಾಡುತ್ತಿಲ್ಲ ಎಂದು ಕಿಡಿಕಾರಿದ ಅವರು ಎಷ್ಟು ಹಣವನ್ನು ಈ ರೋಗದ ನಿಯಂತ್ರಣಕ್ಕೆ ಬಳಸಿದೆ ಎಂದು ಪ್ರಶ್ನಿಸಿದರು.