ಮೈಸೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಕೋವಿಡ್ ವಿಚಾರದಲ್ಲಿ ಆರಂಭ ದಿನಗಳಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ನಿಜ ಎಂದು ಹೇಳಿದ್ದಾರೆ.
‘ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ನಾವು ಎರಡನೇ ಅಲೆಯನ್ನು ಲಘುವಾಗಿ ಪರಿಗಣಿಸಿದೆವು. ಕೊರೊನಾ ನಿಯಂತ್ರಣಕ್ಕೆ ಸಿದ್ಧತೆ ವಿಳಂಬವಾದ ಹಿನ್ನೆಲೆಯಲ್ಲಿ ಇಂದು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ’ ಎಂದು ಸರ್ಕಾರದ ತಪ್ಪನ್ನು ಸಂಸದ ಒಪ್ಪಿಕೊಂಡಿದ್ದಾರೆ.
ಸರ್ಕಾರ ಹಾಗೂ ಜನಪ್ರತಿನಿಧಿ ಆರಂಭದಲ್ಲಿ ನಿರ್ಲಕ್ಷ್ಯ ವಹಿಸಿರುವುದು ನಿಜ. ಇದರ ನಡುವೆ ಈಗ ಸರ್ಕಾರ ತ್ವರಿತವಾಗಿ ಕೆಲಸ ಮಾಡುತ್ತಿದೆ. ಕೊರೊನಾ ನಿಯಂತ್ರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದ್ದಾರೆ.