ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತವರು ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಎರಡು ಕಡೆ ಕಾಂಗ್ರೆಸ್ ಅಧಿಕ್ಕಾರಕ್ಕೇರಿದ್ದು, ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.
ಭದ್ರಾವತಿ ನಗರಸಭೆಯ 35 ಸ್ಥಾನಗಳ ಪೈಕಿ ಕಾಂಗ್ರೆಸ್ 18 ಕಡೆ ಗೆಲುವು ಸಾಧಿಸಿದೆ. ಜೆಡಿಎಸ್ 11 ಸ್ಥಾನ, ಬಿಜೆಪಿ 4 ಮತ್ತು ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಕಂಡಿದ್ದಾರೆ. ಅಭ್ಯರ್ಥಿಯೊಬ್ಬರ ನಿಧನದಿಂದಾಗಿ ಒಂದು ವಾರ್ಡಿನ ಚುನಾವಣೆ ಮುಂದೂಡಲಾಗಿದೆ
ಸಿಎಂ ತವರಲ್ಲೇ ಬಿಜೆಪಿಗೆ ಮುಖಭಂಗ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರಭಾವಿ ಸಚಿವ, ಶಾಸಕರಿರುವ ಜಿಲ್ಲೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಸಂಸದ ರಾಘವೇಂದ್ರ, ಸಚಿವ ಈಶ್ವರಪ್ಪ, ಪ್ರಭಾವಿ ಶಾಸಕರೆಲ್ಲ ಭದ್ರಾವತಿಯಲ್ಲಿ ಪ್ರಚಾರ ನಡೆಸಿದ್ದರು. ಭದ್ರಾವತಿಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಮತದಾರ ಪ್ರಭುಗಳು ಬಿಜೆಪಿಯ ಆಡಳಿತದಿಂದ ರೋಸಿ ಪರ್ಯಾಯ ಪಕ್ಷಗಳತ್ತ ಒಲವು ತೋರಿಸುತ್ತಿದ್ದಾರೆ
ಜೈ ಶ್ರೀರಾಮ್ ಘೋಷಣೆ ವಿವಾದ
ಕಬ್ಬಡ್ಡಿ ಪಂದ್ಯಾವಳಿ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಭದ್ರಾವತಿಯಲ್ಲಿ ಭಾರಿ ಸದ್ದು ಮಾಡಿತ್ತು. ಈ ಘಟನೆ ಸಂಬಂಧ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಅವರ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದನ್ನೇ ಬಿಜೆಪಿಯು ರಾಜಕೀಯಗೊಳಿಸಿ ಮತವಾಗಿ ಪರಿವರ್ತಿಸುವ ಯೋಜನೆ ಹಾಕಿಕೊಂಡ್ಡಿದ್ದರು. ಇದು ಬಿಜೆಪಿಗೆ ಅಧಿಕ ಮತ ನೀಡಲಿದೆ ಎಂದು ಬಿಜೆಪಿ ಮುಖಂಡರು ನಂಬಿಕೊಂಡಿದ್ದರು. ಆದರೆ ಭದ್ರಾವತಿ ಮತದಾರರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ.