ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಸಾಕಾಗುವಷ್ಟು ಆಕ್ಸಿಜನ್ ಮಾತ್ರವೇ ಲಭ್ಯವಿದೆ. ಪೂರೈಕೆ ಹೆಚ್ಚಿಸುವಂತೆ ಸರಕಾರಕ್ಕೆ ನಾವು ಮನವಿ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಆಕ್ಸಿಜನ್ ನ ಸಮಸ್ಯೆ ಇಲ್ಲ. ಆದರೆ ಮುಂದಿನ 24 ಗಂಟೆಗಳಿಗಾಗುವಷ್ಟು ಆಕ್ಸಿಜನ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದವರು ಹೇಳಿದ್ದಾರೆ.
ಇಲ್ಲಿನ ಜನಪ್ರತಿನಿಧಿಗಳು ಕೂಡಾ ಸರಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲೆಗೆ ಬಳ್ಳಾರಿಯಿಂದ ಆಕ್ಸಿಜನ್ ಪೂರೈಕೆಯಾಗುತ್ತಿದೆ. ಪೂರೈಕೆ ಪ್ರಮಾಣವನ್ನು ಏರಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಪ್ರತಿನಿತ್ಯ ಆಕ್ಸಿಜನ್ ಪೂರೈಕೆಯಾಗುವ ಪ್ರಮಾಣದಲ್ಲಿ ಪೂರೈಕೆ ಮುಂದುವರೆದರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಆದರೆ ಜಿಲ್ಲೆಗೆ ಹೊರ ಜಿಲ್ಲೆಗಳಿಂದಲೂ ರೋಗಿಗಳು ಆಗಮಿಸುತ್ತಾರೆ. ಇದರಿಂದಾಗಿ ಆಕ್ಸಿಜನ್ ಬಳಕೆ ಹೆಚ್ಚಾಗುತ್ತಿದೆ ಎಂದವರು ಹೇಳಿದ್ದಾರೆ.