ಸಂಸದ ತೇಜಸ್ವಿ ಸೂರ್ಯ ವಿರುದ್ಧ SDPI ದೂರು

Prasthutha|

ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ SDPI ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಇನ್ನಿತರರು ಕೋವಿಡ್ ವಾರ್ ರೂಮಿಗೆ ತೆರಳಿ ಸುಮಾರು 205 ಸಿಬ್ಬಂದಿಗಳ ಪೈಕಿ ನಿರ್ದಿಷ್ಟ ಸಮುದಾಯಕ್ಕೆ ಸೇರಿದ 17 ಜನ ಸಿಬ್ಬಂದಿಗಳ ಹೆಸರನ್ನು ಮಾತ್ರ ಓದಿ “ಇವರನ್ನು ಹೇಗೆ ನೇಮಕ ಮಾಡಿದ್ದೀರಿ? ಮದರಸಕ್ಕೆ ನೇಮಕ ಮಾಡಿದ್ದೀರಾ?” ಎಂದು ಕೇಳುವ ಮುಖಾಂತರ ಧರ್ಮಗಳ ಮಧ್ಯೆ ವೈಷಮ್ಯ ಸೃಷ್ಟಿಸಿ, ಅಶಾಂತಿ ಉಂಟು ಮಾಡುವ ಪ್ರಯತ್ನ ಮಾಡಿರುವುದನ್ನು ಖಂಡಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕಾರ್ಪೊರೇಟರ್ ಆಗಿರುವ ಮುಜಾಹಿದ್ ಪಾಷಾ ರವರು ಪ್ರಕರಣವನ್ನು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸೈಯದ್ ಮೆಹಬೂಬ್ ಜೊತೆಗಿದ್ದರು.



Join Whatsapp