ವೈದ್ಯಕೀಯ ತಪಾಸಣೆ: ಅಮೆರಿಕಕ್ಕೆ ತೆರಳಿದ ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -

ತಿರುವನಂತಪುರ: ವೈದ್ಯಕೀಯ ತಪಾಸಣೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಮೆರಿಕಕ್ಕೆ ತೆರಳಿದ್ದಾರೆ.

- Advertisement -

ಸುಮಾರು ಹತ್ತು ದಿನಗಳ ಕಾಲ ವಿಜಯನ್ ವಿದೇಶದಲ್ಲಿ ಇರಲಿದ್ದಾರೆ. ಆದರೆ ಚಿಕಿತ್ಸೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಮೂಲಗಳ ಪ್ರಕಾರ, ಅವರು ಮುಂದಿನ ಸಚಿವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಆನ್‌ಲೈನ್‌ನಲ್ಲಿಯೇ ನಿರ್ವಹಿಸುವ ಸಾಧ್ಯತೆಯಿದೆ.

- Advertisement -

ಕೇರಳದಲ್ಲಿ ಆರೋಗ್ಯ ಕ್ಷೇತ್ರದ ನ್ಯೂನತೆಗಳ ಕುರಿತು ವಿವಾದ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಅಮೆರಿಕಕ್ಕೆ ತೆರಳಿರುವ ವಿಜಯನ್ ವಿರುದ್ಧ ವಿರೋಧ ಪಕ್ಷಗಳು ಟೀಕಾಪ್ರಹಾರ ನಡೆಸಿವೆ.

- Advertisement -


Must Read

Related Articles