ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 40ಕ್ಕೆ ಏರಿಕೆ

- Advertisement -

ಹೈದರಾಬಾದ್: ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶದ 48 ವರ್ಷದ ವ್ಯಕ್ತಿ ಶನಿವಾರ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ವೇಳೆಗೆ 19 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಗಾರೆಡ್ಡಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಶೇಖರ್ ಬಡಗು ತಿಳಿಸಿದ್ದಾರೆ.

- Advertisement -

ದುರಂತ ಸಂಭವಿಸಿದ ವೇಳೆ(ಜೂನ್ 30) 143 ಮಂದಿ ಕೆಲಸ ಮಾಡುತ್ತಿದ್ದರು. ಈ ಪೈಕಿ 61 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಿಡುಗಡೆಯಾಗಿದ್ದಾರೆ. ಉಳಿದ 9 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -


Must Read

Related Articles