ಮಂಗಳೂರು: ಫ್ಲೈ ಓವರ್ ಮೇಲೆ ಸ್ಕೂಟರಿಗೆ ಕಾರು ಢಿಕ್ಕಿ; ಆ್ಯಕ್ಟಿವಾ ಸವಾರ ಗಂಭೀರ

Prasthutha|

ಮಂಗಳೂರು: ನಗರದ ಪಂಪ್‌ವೆಲ್ ಫ್ಲೈಓವರಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ‌ಕಾರು ಅಪಘಾತ ನಡೆದ ಸ್ಥಳದಿಂದ ಸುಮಾರು 50 ಮೀ. ದೂರದವರೆಗೆ ಚಲಿಸಿ ಬಳಿಕ ಉರುಳಿಬಿದ್ದಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Join Whatsapp