ಶರಣ್ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ‍: ಜಿಲ್ಲಾಧಿಕಾರಿ ಆದೇಶ

- Advertisement -

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

- Advertisement -

ಶರಣ್ ಪಂಪ್‌ವೆಲ್‌ ಮೇಲೆ 22ಕ್ಕೂ ಹೆಚ್ಚು ಕಾನೂನು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದಾರೆ. ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿರುವ ಪಂಪ್‌ವೆಲ್, ಕೋಮುದ್ವೇಷ ಹರಡುವ ಮತ್ತು ಪ್ರಚೋದನಾಕಾರಿ ಭಾಷಣಗಳಿಂದ ಗಲಾಟೆ ಹಾಗೂ ಗುಂಪು ಘರ್ಷಣೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರು ಸೇರಿದಂತೆ ಕೆಲವು ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶಗಳಾಗಿದ್ದು, ಸಣ್ಣ ಘಟನೆಗಳೂ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ.

- Advertisement -


Must Read

Related Articles